ತಿರುವನಂತಪುರಂ : ಆಟೋ ಡ್ರೈವರ್ ನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ 17 ವರ್ಷದ ದಲಿತ ಯುವತಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ. ಆರೋಪಿ ಆಟೋ ಡ್ರೈವರ್ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಆಕೆಗೆ ಮೋಸ ಮಾಡಿದ್ದಾನೆ. ಇದರಿಂದ ನೊಂದ ಯುವತಿ ಸೀಮೆಎಣ್ಣೆ ಸುರಿದುಕೊಂಡು ತನ್ನನ್ನು ತಾನೇ ಸುಟ್ಟುಕೊಂಡಿದ್ದಾಳೆ. ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನಪ್ಪಿದ್ದಾಳೆ.ಈ ಬಗ್ಗೆ ಯುವತಿಯ