ಇಂದು ಪ್ರತಿಯೊಬ್ಬ ಭಾರತೀಯ ತಮ್ಮ ಸೈನಿಕರ ಬಗ್ಗೆ ಹೆಮ್ಮೆ ಪಟ್ಟುಕೊಳ್ಳಬೇಕಾದ ದಿನ. ಕಳೆದ ರಾತ್ರಿ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಉಗ್ರರ ಕ್ಯಾಂಪ್ಗಳನ್ನು ಗುರಿಯಾಗಿರಿಸಿಕೊಂಡು ಸರ್ಜಿಕಲ್ ಸ್ಟ್ರೈಕ್ (ಸೀಮಿತ ದಾಳಿ) ಕೈಗೊಳ್ಳಲಾಗಿದ್ದು ದಾಳಿಯಲ್ಲಿ ಅನೇಕ ಉಗ್ರರು ಸಾವನ್ನಪ್ಪಿದ್ದಾರೆ. ಅವರ ಜತೆಗಿದ್ದ ಹಲವರು ಗಾಯಗೊಂಡಿದ್ದಾರೆ ಎಂದು ಸೇನಾ ಮುಖ್ಯಸ್ಥ ರಣಬೀರ್ ಸಿಂಗ್ ಬಹಿರಂಗ ಪಡಿಸಿದ್ದು ಇದು ದೇಶಾದ್ಯಂತ ಹೊಸ ಸಂಚಲನವನ್ನು ಮೂಡಿಸಿದೆ.