ನವದೆಹಲಿ(ಆ.11): ಉತ್ತರಪ್ರದೇಶ, ಗೋವಾ, ಉತ್ತರಾಖಂಡ, ಪಂಜಾಬ್ ಮತ್ತು ಮಣಿಪುರ ವಿಧಾನಸಭಾ ಚುನಾವಣೆಗೂ ಮುನ್ನ, ಮತದಾರರ ಅಭಿಪ್ರಾಯ ಸಂಗ್ರಹಿಸುವ ನಿಟ್ಟಿನಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಜನರಿಂದ ನೇರವಾಗಿ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ನಮೋ ಆ್ಯಪ್’ನಲ್ಲಿ ‘ಷೇರ್ ಯುವರ್ ಒಪೀನಿಯನ್’ (ನಿಮ್ಮ ಅಭಿಪ್ರಾಯ ತಿಳಿಸಿ) ಎಂಬ ಆನ್ಲೈನ್ ಸಮೀಕ್ಷೆಗೆ ಚಾಲನೆ ನೀಡಿದ್ದಾರೆ. ಇದರಲ್ಲಿ ಮುಖ್ಯವಾಗಿ ಮತದಾರರಿಗೆ, ಚುನಾವಣೆ ವೇಳೆ ನಿಮಗೆ