Widgets Magazine

ರಾಜ್ಯ ನಾಯಕರಿಗೆ ಅಮಿತ್ ಶಾ ಹೇಳಿದ್ದೇನು ಗೊತ್ತೇ?

ನವದೆಹಲಿ| pavithra| Last Modified ಶುಕ್ರವಾರ, 20 ಡಿಸೆಂಬರ್ 2019 (10:58 IST)
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ತೀವ್ರವಾದ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ನಾಯಕರಿಗೆ ಸೂಚನೆಯೊಂದನ್ನು ನೀಡಿದ್ದಾರೆ.ನಿನ್ನೆ ರಾತ್ರಿ ದೆಹಲಿಯಲ್ಲಿ ಗೃಹ ಸಚಿವ ಬಸನರಾಜ ಬೊಮ್ಮಾಯಿ ಅವರು ಅಮಿತ್ ಶಾ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆ ವೇಳೆ  ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಅಮಿತ್ ಶಾ  ತಾಕೀತು ಮಾಡಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಸನರಾಜ ಬೊಮ್ಮಾಯಿ ಅವರು, ಅಮಿತ್ ಶಾ ಅವರು ರಾಜ್ಯದಲ್ಲಿ ಶಾಂತಿ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಅದರಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು  ಭರವಸೆ ನೀಡಿದ್ದಾರೆ.

ಇದರಲ್ಲಿ ಇನ್ನಷ್ಟು ಓದಿ :