ದೆಹಲಿ : ನಾಳೆಯಿಂದ (ನ.29) ಲೋಕಸಭೆ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ನಿಮಿತ್ತ ಇಂದು ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷಗಳ ಸಭೆ ನಡೆಸಲಿದ್ದಾರೆ. ಚಳಿಗಾಲದ ಅಧಿವೇಶನದ ಕಾರ್ಯಸೂಚಿಯ ಬಗ್ಗೆ ಈ ಸರ್ವಪಕ್ಷಗಳ ಸಭೆಯಲ್ಲಿ ಚರ್ಚೆಯಾಗಲಿದೆ. ಹಾಗೇ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕೂಡ ಶಾಸಕಾಂಗ ಪಕ್ಷದ ನಾಯಕರ ಸಭೆ ಕರೆದಿದ್ದಾರೆ. ಸದ್ಯದ ಮಟ್ಟಿಗೆ ಎಲ್ಲರ ಕಣ್ಣು ಇರುವುದು ಕೃಷಿ ಕಾಯ್ದೆಗಳ ರದ್ದತಿ ಮಸೂದೆ 2021ರ ಮೇಲೆ. ಕಳೆದ ವರ್ಷ ಮುಂಗಾರು