ಪ್ರಮುಖ ಉದ್ಯಮಿ ಹಾಗೂ ಟಾಟಾ ಟ್ರಸ್ಟ್ನ ಅಧ್ಯಕ್ಷರಾದ ರತನ್ ಟಾಟಾ ಅವರಿಗೆ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬುಧವಾರ ಪ್ರದಾನ ಮಾಡಲಾಯಿತು. ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ ಅಸ್ಸಾಂ ಬೈಭವ್ ನೀಡಿದರು. ಮುಂಬೈನ ಕೊಲಾಬದಲ್ಲಿ ಈ ಕಾರ್ಯಕ್ರಮ ನಡೆಯಿತು. ಅಸ್ಸಾಂನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ನೀಡಿದ ಅಮೋಘ ಕೊಡುಗೆಯನ್ನು ಪರಿಗಣಿಸಿ ರತನ್ ಟಾಟಾ ಅವರಿಗೆ ಈ ಗೌರವ