ಮುಂಬೈ : 62 ನಿವಾಸಿಗಳಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಮಹಾರಾಷ್ಟ್ರದ ಥಾಣೆ ಜಿಲ್ಲಾಡಳಿತ ವೃದ್ಧಾಶ್ರಮವನ್ನು ಕಂಟೈನ್ಮೆಂಟ್ ಝೋನ್ ಮಾಡಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ‘ಮಾತೋಶ್ರೀ ವೃದ್ಧಾಶ್ರಮ’ದ 62 ನಿವಾಸಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಈ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್ ಮಾಡಲಾಗಿದೆ ಎಂದು ಜಿಲ್ಲಾಡಳಿತ ಘೋಷಿಸಿದೆ. ಪ್ರಸ್ತುತ ಈ 62 ನಿವಾಸಿಗಳನ್ನು ಹತ್ತಿರದ ಸಿವಿಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆಸ್ಪತ್ರೆಗೆ ದಾಖಲಾದ 62 ರೋಗಿಗಳಲ್ಲಿ 37 ಪುರುಷರು ಮತ್ತು 25 ಮಹಿಳೆಯರು.