ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಬಹುದೊಡ್ಡ ಕುತೂಹಲ ಸೃಷ್ಟಿಸಿದ ವಿಚಾರವಾಗಿತ್ತು. ಈ ಬಾರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಿಂದ ಸ್ಪರ್ಧಿಸಲಿದ್ದಾರೆ ಎಂದು ಬಲವಾದ ಮೂಲಗಳಿಂದ ತಿಳಿದುಬಂದ ಮಾಹಿತಿ ಎಂದೇ ಹೇಳಲಾಗಿತ್ತು. ಆದರೆ ಕುತೂಹಲಕ್ಕೀಗ ತೆರೆಬಿದ್ದಿದೆ. ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಯಿಂದ ಸ್ಪರ್ಧಿಸುತ್ತಿಲ್ಲ.ಬದಲಿಗೆ ಅವರು ಗೋರಖ್ಪುರ ನಗರ ವಿಧಾನಸಭೆ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂಬುದು ಪಕ್ಕಾ ಆಗಿದೆ. ಈ ಗೋರಖ್ಪುರ ಯೋಗಿ ಆದಿತ್ಯನಾಥ್ರ