ಚೆನ್ನೈ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾದನೆಂದು ಪತ್ನಿಯೇ ಸುಪಾರಿ ಕೊಟ್ಟು ಕೊಲ್ಲಲು ಯತ್ನಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.ಪತ್ನಿ ತನ್ನ ಪತಿಯನ್ನು ಕೊಲ್ಲಲು ಇಬ್ಬರು ರೌಡಿಗಳಿಗೆ ಸುಪಾರಿ ಕೊಟ್ಟಿದ್ದಳು. ಮೊಬೈಲ್ ರಿಪೇರಿ ಅಂಗಡಿ ಇಟ್ಟುಕೊಂಡಿದ್ದ ಪತಿ ಮನೆಗೆ ಮರಳುವಾಗ ಇಬ್ಬರು ಅವರ ಮೇಲೆ ದಾಳಿ ನಡೆಸಿದ್ದರು. ಗಾಯಗೊಂಡಿದ್ದ ಪತಿ ರೌಡಿಗಳಿಂದ ತಪ್ಪಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಂತರ ಪೊಲೀಸರಿಗೆ ದೂರು ನೀಡಿದ್ದಾನೆ.ತನಿಖೆ ನಡೆಸಿದಾಗ ತನ್ನ ಜೊತೆಗೆ ಮೊದಲು ಕೆಲಸ ಮಾಡುತ್ತಿದ್ದ ವ್ಯಕ್ತಿಯೊಂದಿಗೆ