ಕುಡಿಯಲು ಹಣ ಕೊಡಲಿಲ್ಲ ಎಂದು ಪತ್ನಿಯನ್ನು ಕ್ರೂರಿ ಪತಿಯೊಬ್ಬ ಹೊಡೆದು ಕೊಂದಿದ್ದಾನೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಚಿಕ್ಕ ಉಪ್ಪೇರಿಯಲ್ಲಿ ಘಟನೆ ನಡೆದಿದೆ. ಸುನೀತಾ ಪತಿಯಿಂದ ಹತ್ಯೆಯಾದ ಮಹಿಳೆ. ಪತ್ನಿಯ ಹತ್ಯೆಗೈದ ಆರೋಪಿ ಬಸವರಾಜ್. ಪ್ರೀತಿಸಿ ಮದುವೆಯಾಗಿದ್ದ ಇಬ್ಬರೂ, 2015ರಲ್ಲಿ ಲಿಂಗಸಗೂರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸತಿಪತಿಗಳಾಗಿದ್ದರು.ಮದುವೆಯಾಗಿ ಕೆಲ ದಿನಗಳ ಕಾಲ ಮಾತ್ರ ಸುಖ ಸಂಸಾರ ನಡೆಸಿದ್ದರು. ಬಳಿಕ ಕುಡಿತಕ್ಕೆ ದಾಸನಾಗಿದ್ದ ಪತಿ ಬಸವರಾಜ ನಿತ್ಯ ಹಣಕ್ಕಾಗಿ ಪತ್ನಿಯನ್ನು ಪೀಡಿಸುತ್ತಿದ್ದ.