ಭಾರತ ವಿಶ್ವದ ಫ್ಯಾಕ್ಟರಿ ಆಗುತ್ತಾ ಇಲ್ಲವೋ ಗೊತ್ತಿಲ್ಲ. ಈ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ. 2014 ರಲ್ಲಿ ಮೇಕ್ ಇನ್ ಇಂಡಿಯಾ ಯೋಜನೆ ಬಂದ ಬಳಿಕ 27 ಕ್ಷೇತ್ರಗಳಲ್ಲಿ ಹೂಡಿಕೆಯಾಗಿದೆ. ವಿಶ್ವ ಬ್ಯಾಂಕ್ ಪ್ರಕಟಿಸುವ ಉದ್ಯಮ ಸ್ನೇಹಿ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತದ ಸ್ಥಾನ ಉತ್ತಮವಾಗುತ್ತಿದೆ. 2014 ರಲ್ಲಿ 142, 2017 ರಲ್ಲಿ 100, 2022 ರಲ್ಲಿ 63ನೇ ಸ್ಥಾನಕ್ಕೆ ಜಿಗಿದಿದೆ. ದೊಡ್ಡ ದೊಡ್ಡ ಕ್ಷೇತ್ರಗಳಲ್ಲಿ ಭಾರತ ಚೀನಾಗೆ ಸ್ಪರ್ಧೆ ನೀಡುವುದು