ನವದೆಹಲಿ: ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಕಟ್ಟುವ ಬಗ್ಗೆ ದೆಹಲಿಯಲ್ಲಿ ಇಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನವಾಗಲಿದೆ. ಇಂದು ಬೆಳಿಗ್ಗೆ 10.30 ಕ್ಕೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ರಾಹುಲ್ ಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.ಡಿಸೆಂಬರ್ 1 ಕ್ಕೆ ಅಂದರೆ ಗುಜರಾತ್ ಚುನಾವಣೆಗೆ ಮೊದಲು ರಾಹುಲ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೇರಲಿದ್ದಾರೆ ಎಂಬ