ನವದೆಹಲಿ : ಈಗಾಗಲೇ ಸರ್ಕಾರಿ ಸ್ವಮ್ಯದ ಹಲವು ಬ್ಯಾಂಕುಗಳನ್ನು ವಿಲೀನಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯಬಿದ್ದರೆ ಇನ್ನಷ್ಟು ಬ್ಯಾಂಕುಗಳನ್ನು ವಿಲೀನ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು, ನಾವು ಬ್ಯಾಂಕುಗಳ ವಿಲೀನ ಮತ್ತು ಮರುಬಂಡವಾಳ ಪೂರಣ ಕಾರ್ಯ ಯಶಸ್ವಿಯಾಗಿ ಮಾಡಿದ್ದೇವೆ. ದಿವಾಳಿ ಸಂಹಿತೆ ಕೂಡ ಯಶಸ್ವಿಯಾಗಿದ್ದು, ಇದರಿಂದಾಗಿ ಬ್ಯಾಂಕುಗಳಿಗೆ 4 ಲಕ್ಷ ಕೋಟಿಗಿಂತ ಹೆಚ್ಚು ಹಣ