ನವದೆಹಲಿ : ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶತ್ರು ರಾಷ್ಟ್ರದ ಯುದ್ಧ ವಿಮಾನವನ್ನು ಹಿಮ್ಮೆಟ್ಟಿಸುವ ಭರದಲ್ಲಿ , ಪಾಕಿಸ್ತಾನದ ವಶವಾಗಿ ಬಂಧನದಲ್ಲಿದ್ದು, ದೇಶಕ್ಕೆ ಮರಳಿದ ಭಾರತೀಯ ವಾಯು ಪಡೆಯ ಪೈಲಟ್ ಅಭಿನಂದನ್ ಸಾಹಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಅಭಿನಂದನ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಕಾಶ್ಮೀರ ಕಣಿವೆಯಲ್ಲಿ ಅವರ ಜೀವಕ್ಕೆ ಅಪಾಯವಿದೆ ಎಂಬುದನ್ನು ಅರಿತ ವಾಯುಪಡೆ ಅವರನ್ನು ಶ್ರೀನಗರ