ಮಹಿಳೆಯ ಮೇಲೆ 20 ಕಾಮುಕರಿಂದ ಗ್ಯಾಂಗ್‌ರೇಪ್

ರಾಂಚಿ| Rajesh patil| Last Modified ಬುಧವಾರ, 13 ಸೆಪ್ಟಂಬರ್ 2017 (15:40 IST)
ನಗರದ ವಿಶ್ವವಿದ್ಯಾಲಯದ ಆವರಣದಲ್ಲಿ ಮಹಿಳೆಯೊಬ್ಬಳ ಮೇಲೆ 20ಕ್ಕೂ ಹೆಚ್ಚು ಜನರು ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.
ಅತ್ಯಾಚಾರಿ ಆರೋಪಿಗಳು 18 ರಿಂದ 22 ವರ್ಷ ವಯಸ್ಸಿನವರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 16 ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೂ ನಾಲ್ವರು ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಮಹಿಳೆ ತನ್ನ ಬಾಯ್‌ಫ್ರೆಂಡ್‌ನೊಂದಿಗೆ ಬೈಕ್‌ನಲ್ಲಿ ಬರುತ್ತಿರುವಾಗ, ಆರು ಮಂದಿ ಆರೋಪಿಗಳು ಅವರನ್ನು ತಡೆದು ನಿಲ್ಲಿಸಿದ್ದಾರೆ. ಬುಡಕಟ್ಟು ಸಮುದಾಯದ ಮಹಿಳೆಯೊಂದಿಗೆ ಸಂಬಂಧ ಹೊಂದಿರುವುದಕ್ಕಾಗಿ ಆರೋಪಿಗಳು ಯುವಕನನ್ನು ಥಳಿಸಿ ಆತನಿಂದ ಮೊಬೈಲ್ ಫೋನ್ ಮತ್ತು 5 ಸಾವಿರ ರೂಪಾಯಿಗಳನ್ನು ಕಿತ್ತುಕೊಂಡಿದ್ದಾರೆ. 
 
ತದನಂತರ ಕೆಲ ಸ್ನೇಹಿತರಿಗೆ ಮೊಬೈಲ್ ಕರೆ ಮಾಡಿದ ಆರೋಪಿಗಳು, ಚಾಕುವಿನಿಂದ ಬೆದರಿಸಿ ಮಹಿಳೆ ಮತ್ತು ಆಕೆಯ ಬಾಯ್‌ಫ್ರೆಂಡ್‌ಗೆ ನಗ್ನರಾಗುವಂತೆ ಒತ್ತಾಯಿಸಿದ್ದಾರೆ. ನಂತರ ಬಾಯ್‌ಫ್ರೆಂಡ್‌ಗೆ ಮಹಿಳೆಯ ಮೇಲೆ ರೇಪ್ ಮಾಡುವಂತೆ ಒತ್ತಡ ಹೇರಿದ್ದಾರೆ. ನಂತರ ಎಲ್ಲಾ 20 ಆರೋಪಿಗಳು ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಸಾಕ್ಷ್ಯಗಳನ್ನು ನಾಶಪಡಿಸುವ ಉದ್ದೇಶದಿಂದ ಆರೋಪಿಗಳು ಅಲ್ಲಿಯೇ ಇದ್ದ ಕೊಳದಲ್ಲಿ ಸ್ಥಾನಮಾಡುವಂತೆ ಮಹಿಳೆ ಮೇಲೆ ಒತ್ತಡ ಹೇರಿದ್ದಾರೆ. ಆಕೆ ಸ್ನಾನ ಮಾಡಿದ ನಂತರ ಆರೋಪಿಗಳು ಪರಾರಿಯಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


ಇದರಲ್ಲಿ ಇನ್ನಷ್ಟು ಓದಿ :