ನವದೆಹಲಿ: ರೈಲು ಪ್ರಯಾಣದ ವೇಳೆ ಸಾಕಷ್ಟು ಅಪರಾಧ ಕೃತ್ಯಗಳು ನಡೆಯುವ ಘಟನೆಗಳನ್ನು ಸಾಕಷ್ಟು ಕೇಳಿದ್ದೇವೆ. ಅಂತಹದ್ದೇ ಒಂದು ಘಟನೆ ಹರ್ಯಾಣದಲ್ಲಿ ನಡೆದಿದೆ.ಹಿಸ್ಸಾರ್ ರೈಲ್ವೇ ಸ್ಟೇಷನ್ ವ್ಯಾಪ್ತಿಯಲ್ಲಿ ರೈಲಿನಲ್ಲಿ ಚಲಿಸುತ್ತಿದ್ದ 35 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಯತ್ನ ನಡೆದಿದೆ. ಮಹಿಳೆ ಪ್ರತಿರೋಧಿಸಿದಾಗ ಆಕೆಯನ್ನು ರೈಲಿನಿಂದ ತಳ್ಳಿ ಕೊಲೆ ಮಾಡಲಾಗಿದೆ.ಈ ಬಗ್ಗೆ ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನ್ನಿಬ್ಬರು ಮಕ್ಕಳೊಂದಿಗೆ ತವರಿಗೆ ಹೋಗಿ ವಾಪಸ್ ಆಗುತ್ತಿದ್ದಾಗ ಯುವಕನೊಬ್ಬ ರೈಲಿನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.