ನವದೆಹಲಿ : ಒಂದು ದೇಶವಾಗಿ ಮಹಿಳೆಯರ ಅಭಿವೃದ್ಧಿಗಿಂತ ಮಹಿಳಾ ನೇತೃತ್ವದ ಅಭಿವೃದ್ಧಿಗೆ ಆದ್ಯತೆ ನೀಡುವುದು ಗುರಿಯಾಗಬೇಕು ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಶನಿವಾರ ಅಭಿಪ್ರಾಯಪಟ್ಟರು. ಕಾನೂನು ಸೇವಾ ಸಂಸ್ಥೆಗಳಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವನ್ನೂ ಪ್ರತಿಪಾದಿಸಿದರು. ಕಾನೂನು ಸೇವೆಗಳ ಪ್ರಾಧಿಕಾರವು ಸಮಾಜದ ತಳ ಸಮುದಾಯಕ್ಕೆ ನೆರವು ನೀಡಲು ವಿಶೇಷ ಪ್ರಯತ್ನಗಳನ್ನು ಮಾಡಬೇಕು ಎಂದು ಹೇಳಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ (ಎನ್ಎಎಲ್ಎಸ್ಎ) ಏರ್ಪಡಿಸಿದ್ದ ಆರು ವಾರಗಳ ಅವಧಿಯ ಭಾರತದಲ್ಲಿ ಕಾನೂನು