ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ನಿತ್ಯ ಆರು ಅತ್ಯಾಚಾರ, ಏಳು ಕಿರುಕುಳ ಪ್ರಕರಣಗಳು ದಾಖಲಾಗುತ್ತಿವೆ. ಪ್ರಸುತ್ತ ವರ್ಷದಲ್ಲಿ ಶೇಕಡಾ 6 ರಷ್ಟು ಅತ್ಯಾಚಾರ ಪ್ರಕರಣಗಳು ಹೆಚ್ಚಿವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.ಈ ವರ್ಷದ ಮೊದಲ ಆರು ತಿಂಗಳಲ್ಲಿ 1,100ಕ್ಕೂ ಅಧಿಕ ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಸಕ್ರಿಯ ನೋಂದಣಿ, ಮಹಿಳಾ ಸ್ನೇಹಿ ಸಹಾಯವಾಣಿಗಳು ಮತ್ತು ಸ್ಥಳೀಯ ಪೊಲೀಸ್ ಬೂತ್ಗಳಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ