ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಸಂಬಂಧಿಯನ್ನು ಚಾಕುವಿನಿಂದ ಇರಿದು ಕೊಂದ ಯುವತಿ

ತಿರುವಳ್ಳೂರು| pavithra| Last Modified ಮಂಗಳವಾರ, 5 ಜನವರಿ 2021 (08:06 IST)
ತಿರುವಳ್ಳೂರು : 19 ವರ್ಷದ ಯುವತಿಯೊಬ್ಬಳು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 24 ವರ್ಷದ ಸಂಬಂಧಿಯನ್ನು ಚಾಕುವಿನಿಂದ ಹಲವು ಬಾರಿ ಇರಿದು ಕೊಂದ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಶೋಲವರಂನಲ್ಲಿ ನಡೆದಿದೆ.

ಯುವತಿ ಮಂದ ಬೆಳಕು ಇರುವ ಪ್ರದೇಶದಲ್ಲಿ ನಿಂತಿದ್ದಾಗ ಅಲ್ಲಿಗೆ ಬಂದ ಸಂಬಂಧಿ ಆಕೆಯ ಕುತ್ತಿಗೆಗೆ ಚಾಕು ಇಟ್ಟು ಕೊಲೆ ಮಾಡುವುದಾಗಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. ಆಗ ಯುವತಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ವ್ಯಕ್ತಿಯನ್ನು ತಳ್ಳಿದಾಗ ಚಾಕು ಕೆಳಗೆ ಬಿದ್ದಿದೆ. ಅದರಿಂದ ಆಕೆ ಆತನನ್ನು ಹಲವು ಬಾರಿ ಇರಿದು ಕೊಲೆ ಮಾಡಿದ್ದಾಳೆ.

ಈ ಬಗ್ಗೆ ಶೋಲವರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ  ಯುವತಿಯನ್ನು ಬಂಧಿಸಿಲ್ಲ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :