ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜನಸಂಖ್ಯೆ ನಿಯಂತ್ರಣದ ಬಗ್ಗೆ ನೀಡಿರುವ ಅಭಿಪ್ರಾಯದಿಂದ ರಾಜಕೀಯ ಕೋಲಾಹಲ ಸೃಷ್ಟಿಯಾಗಿದೆ. ನಿತೀಶ್ ಕುಮಾರ್ ತಮ್ಮ ಹೇಳಿಕೆಯಲ್ಲಿ ಮಹಿಳೆಯರನ್ನು ಅವಹೇಳನ ಮಾಡಿದ್ದಾರೆಂದು ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ. ಬಿಹಾರದ ವೈಶಾಲಿಯಲ್ಲಿ ನಡೆಯುತ್ತಿರುವ `ಸಮಾಧಾನ ಯಾತ್ರೆ’ಯನ್ನುದ್ದೇಶಿಸಿ ಮಾತನಾಡಿದ ನಿತೀಶ್ ಕುಮಾರ್, ಜನಸಂಖ್ಯಾ ನಿಯಂತ್ರಣಕ್ಕೆ ಪುರುಷರು ಹೆಚ್ಚಿನ ಒಲವು ತೋರಬೇಕು. ಮಹಿಳೆಯರು ಅವಿದ್ಯಾವಂತರಾಗಿದ್ದು, ಜನಸಂಖ್ಯೆ ನಿಯಂತ್ರಣದ ಕುರಿತು ಅವರಿಗೆ ಜ್ಞಾನ ಕಡಿಮೆ.