ನವದೆಹಲಿ: ಬಿಜೆಪಿ ಹಿರಿಯ ನಾಯಕ ಯಶವಂತ್ ಸಿನ್ಹಾ ಮತ್ತೊಮ್ಮೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಯಶವಂತ್ ಸಿನ್ಹಾ ಇದೀಗ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಆರ್ಥಿಕ ನೀತಿ ಮತ್ತು ಮಹಿಳಾ ಸುರಕ್ಷತೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ.ನೋಟು ನಿಷೇಧದ ಸಂದರ್ಭದಲ್ಲಿಯೇ ಯಶವಂತ್ ಸಿನ್ಹಾ ಮೋದಿ ವಿರುದ್ಧ ಬಹಿರಂಗವಾಗಿ ಕಿಡಿ ಕಾರಿದ್ದರು. ಇದೀಗ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಇಂದಿನ ಆರ್ಥಿಕ ಪರಿಸ್ಥಿತಿ