ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಗೋವಾ ನೀರಾವರಿ ಸಚಿವ ವಿನೋದ ಪಾಲ್ಯೇಕರ್ ಅವರು ಕನ್ನಡಿಗರ ಕ್ಷಮೆ ಕೋರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಗೋವಾ ಹಾಗೂ ಕರ್ನಾಟಕ ರಾಜ್ಯಗಳ ನಡುವೆ ಬಿರುಕು ಮೂಡಿಸುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ, ಕನ್ನಡಿಗರ ಬಗ್ಗೆ ಮಾತನಾಡಲು ಪಾಲ್ಯೇಕರ್ಗೆ ಯಾರೂ ಅಧಿಕಾರ ಕೊಟ್ಟಿಲ್ಲ ಎಂದು ಹೇಳಿದ್ದಾರೆ. ಮಹಾದಾಯಿ ನೀರಿನ ವಿವಾದದ ಸಂಬಂಧ ರಾಜ್ಯಕ್ಕೆ ಭೇಟಿ ನೀಡಿದ್ದ ಗೋವಾ ಸಚಿವ ವಿನೋದ ಪಾಲ್ಯೇಕರ್ ಅವರು