ಲಕ್ನೋ : ರಾಮ ಮಂದಿರ ನಿರ್ಮಾಣ ಹಂತದಲ್ಲಿರುವ ನಡುವೆಯೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಅಯೋಧ್ಯೆಯಲ್ಲಿ ಪ್ರತ್ಯೇಕ ದೇಗುಲವನ್ನೇ ನಿರ್ಮಾಣ ಮಾಡಲಾಗಿದೆ. ಯೋಗಿ ಆದಿತ್ಯನಾಥ್ ಅವರ ಪ್ರತಿಮೆಗೆ ವ್ಯಕ್ತಿಯೊಬ್ಬರು ಪೂಜೆ ಮಾಡುತ್ತಿರುವ ಚಿತ್ರಗಳು ಹಾಗೂ ದೇವಸ್ಥಾನದಲ್ಲಿ ನಿರ್ಮಿಸಲಾಗಿರುವ ಯೋಗಿ ಮೂರ್ತಿಯ ಚಿತ್ರಗಳು ಜಾಲತಾಣದಲ್ಲಿ ವೈರಲ್ ಆಗಿವೆ.ರಾಮಮಂದಿರ ನಿರ್ಮಾಣಕ್ಕೆ ಅಂದಾಜು 1,800 ಕೋಟಿ ವೆಚ್ಚ ಆಗಿದೆ. ರಾಮ ಮಂದಿರ ನಿರ್ಮಾಣ ಕಾಮಗಾರಿ ಶೇ.40ಕ್ಕೂ ಹೆಚ್ಚು ಭಾಗ ಪೂರ್ಣಗೊಂಡಿದೆ.