ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಟಾರ್ ಪ್ರಚಾರಕರನ್ನಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಾಜ್ಯಕ್ಕೆ ಕರೆತರಲು ಭಾರತೀಯ ಜನತಾ ಪಾರ್ಟಿ ಮುಂದಾಗಿದೆ. ಗುಜರಾತ್ನಲ್ಲಿ ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಚಾರ ನಡೆಸಿದ ಕಡೆಗಳಲ್ಲಿ ಬಿಜೆಪಿಗೆ ಅನುಕೂಲವಾಗಿದೆ ಎನ್ನಲಾಗಿದ್ದು, ಆದ್ದರಿಂದ ರಾಜ್ಯದಲ್ಲೂ ಅವರಿಂದ ಪ್ರಚಾರ ನಡೆಸಲು ಕೇಂದ್ರ ನಾಯಕರು ಚಿಂತನೆ ನಡೆಸಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ 35