ಹೈದರಾಬಾದ್ : ಚುನಾವಣೆಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಶಾಸಕ, ದಲಿತ ನಾಯಕ ಎಮ್. ಸುನೀಲ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸುನೀಲ್ ಕುಮಾರ್ ಅವರು ಆಂಧ್ರಪ್ರದೇಶದ ಪುತಲಪಟ್ಟು ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದರು. ಆದರೆ ಟಿಕೆಟ್ ನಿರಾಕರಿಸಲಾಗಿತ್ತು. ಹೀಗಾಗಿ ಅವರು ಮಣಿಕಟ್ಟು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಕ್ಕೂ ಮುನ್ನ ವಿಡಿಯೋವನ್ನು ಚಿತ್ರೀಕರಿಸಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಸದ್ಯ ಕುಮಾರ್ ಅವರನ್ನು ಮದನಪಲ್ಲಿಯ ಆಸ್ಪತ್ರೆಗೆ