10 ಮಂದಿಗೆ ಆಳ್ವಾಸ್ ನುಡಿಸಿರಿ ಪ್ರಶಸ್ತಿ ಪ್ರದಾನ

ಮೂಡುಬಿದರೆ, ಸೋಮವಾರ, 1 ಡಿಸೆಂಬರ್ 2008 (09:23 IST)

ಈ ಬಾರಿಯ ಆಳ್ವಾಸ್ ನುಡಿಸಿರಿ ಪ್ರಶಸ್ತಿಯನ್ನು ಹತ್ತುಮಂದಿ ಕನ್ನಡದ ಗಣ್ಯರು ಹಾಗೂ ಹೊರನಾಡ ಕನ್ನಡ ಸಂಸ್ಥೆಯೊಂದಕ್ಕೆ ಪ್ರದಾನ ಮಾಡಲಾಯಿತು.

ನಾಡೋಜ ದರೋಜಿ ಈರಮ್ಮ, ಗೊ.ರು.ಚನ್ನಬಸಪ್ಪ, ಡಾ.ಸಾ.ಶಿ.ಮರುಳಯ್ಯ, ಹೊಸ್ತೋಟ ಮಂಜುನಾಥ ಭಾಗವತ, ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ, ಸದಾನಂದ ಸುವರ್ಣ, ಎ. ಈಶ್ವರಯ್ಯ, ವೈ.ಕೆ. ಮುದ್ದುಕೃಷ್ಣ, ನಾಗತಿಹಳ್ಳಿ ಚಂದ್ರಶೇಖರ್, ಸಿರಿ ಅಜ್ಜಿ ಮತ್ತು ಬಹರೇನ್ ಕನ್ನಡ ಸಂಘಗಳು ಪ್ರಶಸ್ತಿಗೆ ಭಾಜವಾಗಿವೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬಹರೈನ್ ಕನ್ನಡ ಸಂಘದ ಪರವಾಗಿ ಸಂಘದ ಅಧ್ಯಕ್ಷ ಆಯ್‌ಸ್ಟಿನ್ ಸಂತೋಷ್ ಪ್ರಶಸ್ತಿ ಸ್ವೀಕರಿಸಿದರು.

ಗೊ.ರು.ಚನ್ನಬಸಪ್ಪ, ಡಾ.ಸಾ.ಶಿ. ಮರುಳಯ್ಯ, ಲಕ್ಷ್ಮೀನಾರಾಯಣ ಭಟ್ಟ, ನಾಗತಿಹಳ್ಳಿ ಚಂದ್ರಶೇಖರ್ ಸನ್ಮಾನಿತರ ಪರವಾಗಿ ಅನಿಸಿಕೆ ವ್ಯಕ್ತಪಡಿಸಿದರು. ಬಹರೇನ್ ಕನ್ನಡ ಸಂಘದ ಅಧ್ಯಕ್ಷ ಆಯ್‌ಸ್ಟಿನ್ ಸಂತೋಷ್ ಅವರು ತಮ್ಮೊಂದಿಗೆ ಬಹರೈನ್ ರಾಜ ಲಾಂಛನವಾದ "ಖಡ್ಗ'ದ ಪ್ರತಿಕೃತಿಯೊಂದನ್ನು ನುಡಿಸಿರಿಯ ರೂವಾರಿ ಡಾ| ಎಂ.ಮೋಹನ್ ಆಳ್ವಾ ಅವರಿಗೆ ಹಸ್ತಾಂತರಿಸಿದರು.ಇದರಲ್ಲಿ ಇನ್ನಷ್ಟು ಓದಿ :  

ವೆಬ್‌ದುನಿಯಾ ವಿಶೇಷ 08

ಕನ್ನಡಮ್ಮನ ಐಸಿರಿ 'ನುಡಿಸಿರಿ'ಗೆ ಸಜ್ಜಾಗಿದೆ ಮೂಡುಬಿದಿರೆ

2004ರಲ್ಲಿ ಆರಂಭವಾಯಿತು ಈ ನುಡಿಸಿರಿ ಎಂಬ ನುಡಿ ಜಾತ್ರೆಯ ಸರಣಿ. ಈ ಬಾರಿ ನವೆಂಬರ್ 28, 29 ಹಾಗೂ 30ರಂದು ...

ಆಳ್ವಾಸ್ ನುಡಿಸಿರಿಗೆ ಕಣವಿ ಸಾರಥ್ಯ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಕನ್ನಡ ನಾಡು-ನುಡಿಯ ...

ಆಳ್ವಾಸ್ ನುಡಿಸಿರಿ-08: ನಿಮ್ಮ ವೆಬ್‌ದುನಿಯಾದಲ್ಲಿ

ಕನ್ನಡ ಮಣ್ಣಿನಲ್ಲಿ ಹಾಸುಹೊಕ್ಕಾಗಿರುವ ಜನಪದೀಯ ಸಂಸ್ಕೃತಿ, ಸಂಗೀತ, ಸಾಹಿತ್ಯಕ್ಕೆ ಸಹೃದಯರಿಂದ ಯಾವ ...