ಚೆನ್ನೈ : ಟಿ20 ಕ್ರಿಕೆಟ್ನ ಸ್ಪೋಟಕ ಬ್ಯಾಟರ್ ಎಬಿ ಡಿವಿಲಿಯರ್ಸ್ ಅವರ ನಿವೃತ್ತಿ ಬೆನ್ನಲ್ಲೇ ಇದೀಗ ಮಹೇಂದ್ರ ಸಿಂಗ್ ಧೋನಿಯ ಅವರ ಮುಂದಿನ ನಡೆಯೇನು? ಎಂಬ ಚರ್ಚೆಗಳು ಶುರುವಾಗಿದೆ. ಏಕೆಂದರೆ ಧೋನಿ ಮುಂದಿನ ಸೀಸನ್ ಐಪಿಎಲ್ ಮೂಲಕ ಕ್ರಿಕೆಟ್ ಅಂಗಳಕ್ಕೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಇದೀಗ ಧೋನಿ ನೀಡಿರುವ ಹೇಳಿಕೆಯೊಂದು ಮಹತ್ವ ಪಡೆದುಕೊಂಡಿದೆ. ಚೆನ್ನೈನಲ್ಲಿ ನಡೆದ ‘ದಿ ಚಾಂಪಿಯನ್ಸ್ ಕಾಲ್’ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ