ಒಂದು ಬಾಣಲೆಯನ್ನು ತೆಗೆದುಕೊಳ್ಳಿ ಅದಕ್ಕೆ 2 ಚಮಚ ಎಣ್ಣೆ ಹಾಕಿ. ಎಣ್ಣೆ ಬಿಸಿಯಾದ ನಂತರ ಜೀರಿಗೆ ಹಾಕಿ ಚಟಪಟಾಯಿಸಿ. ನಂತರ ಅದಕ್ಕೆ ಹೆಚ್ಚಿದ ಶುಂಠಿ ಮತ್ತು ಹಸಿಮೆಣಸು ಹಾಕಿ. ಚೆನ್ನಾಗಿ ಮಿಕ್ಸ್ ಮಾಡಿ. ಉರಿಯನ್ನು ಸಣ್ಣಗೆ ಮಾಡಿ ಅರಿಶಿನ, ಅಚ್ಚಖಾರದ ಪುಡಿ, ಧನಿಯಾ ಪುಡಿ, ಆಮ್ಚೂರ್ ಪೌಡರ್, ಇಂಗು ಮತ್ತು ಉಪ್ಪನ್ನು ಹಾಕಿ. ಮಸಾಲೆಯನ್ನು ಹೊತ್ತಿಸದಂತೆ ಹುರಿಯಿರಿ.