ದೇವತೆಯ ಮೂಲಸ್ಥಳವು ಕೊಡಚಾದ್ರಿ ಶಿಖರದ ತುದಿಯ (3880) ಮೇಲಿದೆ ಎಂಬುದಾಗಿಯೂ ಮತ್ತು ಕೊಡಚಾದ್ರಿಯನ್ನು ಸಂಪೂರ್ಣವಾಗಿ ಚಾರಣಮಾಡಿಕೊಂಡು ಮೂಲಸ್ಥಳವನ್ನು ತಲುಪುವುದು ಸಾಮಾನ್ಯ ಜನರಿಗೆ ಅತ್ಯಂತ ಕಷ್ಟಕರವಾಗಿದ್ದರಿಂದ, ಶಂಕರಾಚಾರ್ಯರು ದೇವಸ್ಥಾನವನ್ನು ಕೊಲ್ಲೂರಿನಲ್ಲಿ ಪುನರ್-ಸ್ಥಾಪಿಸಿದರು ಎಂಬುದಾಗಿಯೂ ನಂಬಲಾಗಿದೆ.ಇಲ್ಲಿ ಪಂಚಮುಖಿ ಗಣೇಶನ ಒಂದು ಮನಮೋಹಕ ಶಿಲ್ಪವಿರುವುದನ್ನು ಕಾಣಬಹುದು. ಕರ್ನಾಟಕದಲ್ಲಿನ ಪರಶುರಾಮ ಕ್ಷೇತ್ರದ ಸಪ್ತ ಮುಕ್ತಿಸ್ಥಳದ ತೀರ್ಥಯಾತ್ರಾ ತಾಣಗಳ ಪೈಕಿ ಒಂದೆಂಬುದಾಗಿ ಕೊಲ್ಲೂರು ಪರಿಗಣಿಸಲ್ಪಟ್ಟಿದೆ. ಆ ತಾಣಗಳೆಂದರೆ: ಕೊಲ್ಲೂರು, ಉಡುಪಿ, ಸುಬ್ರಮಣ್ಯ, ಕುಂಬಾಶಿ, ಕೋಟೇಶ್ವರ, ಶಂಕರನಾರಾಯಣ