ದಸರಾವನ್ನು ಮೈಸೂರು ಸ್ವಾಗತಿಸಿದರೆ... ಮಡಿಕೇರಿ ಬೀಳ್ಕೊಡುತ್ತದೆ... ಈ ಮಾತು ಅಕ್ಷರಶಃ ನಿಜ. ಮೈಸೂರಿನಲ್ಲಿ ಹಗಲು ನಡೆಯುವ ಜಂಬೂಸವಾರಿ ಗತ ದಿನಗಳ ರಾಜವೈಭವವನ್ನು ಕಣ್ಮುಂದೆ ತಂದರೆ, ಮಡಿಕೇರಿಯಲ್ಲಿ ರಾತ್ರಿ ನಡೆಯುವ ದಶಮಂಟಪಗಳ ಮೆರವಣಿಗೆ ದೇವಲೋಕಕ್ಕೆ ಕರೆದೊಯ್ಯುತ್ತದೆ. ಮಡಿಕೇರಿ ದಸರಾ ಎಂದರೆ ಅಲ್ಲಿ ಅಧಿಕಾರಿಗಳ ದರ್ಬಾರ್ ಇಲ್ಲ. ಸರ್ಕಾರದ ಹಸ್ತಕ್ಷೇಪವಿಲ್ಲ. ಜಾತಿ, ಧರ್ಮಗಳ ಹಂಗುಗಳಿಲ್ಲದೆ ಜನರೇ ಜನರಿಗೋಸ್ಕರ ಆಚರಿಸುವ ಜನೋತ್ಸವವಾಗಿದೆ. ಹಾಗಾಗಿ ಇತರೆಡೆ ಆಚರಿಸಲ್ಪಡುವ ದಸರಾಕ್ಕಿಂತ ಮಡಿಕೇರಿ ದಸರಾ ವಿಭಿನ್ನ ಹಾಗೂ ವಿಶಿಷ್ಟವಾಗಿ