ಭೋಪಾಲ್ : ಈಗಾಗಲೇ ಹಿಂಪಡೆದಿರುವ ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟಪಡಿಸಿದ್ದಾರೆ.ಕೆಲವು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಾದ ಬಳಿಕ ತಿದ್ದುಪಡಿಯೊಂದಿಗೆ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಮತ್ತೆ ಜಾರಿಗೊಳಿಸಲಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಮಾತನ್ನು ಅಲ್ಲಗಳೆದಿರುವ ಕೃಷಿ ಸಚಿವ ತೋಮರ್, ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ ಎಂದು ತಿಳಿಸಿದ್ದಾರೆ. ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೃಷಿ ಕಾನೂನುಗಳ