ನವದೆಹಲಿ : 73ನೇ ಗಣರಾಜ್ಯೋತ್ಸವದ ಸ್ಮರಣಾರ್ಥವಾಗಿ ಗೂಗಲ್ ಡೂಡಲ್ ವಿಶೇಷ ಗೌರವವನ್ನು ಸಲ್ಲಿಸಿದೆ.ಈ ಎನಿಮೆಟೆಡ್ ಡೂಡಲ್ನಲ್ಲಿ ರಾಷ್ಟ್ರದ ಹೆಮ್ಮೆಯನ್ನು ಪ್ರತಿಬಿಂಬಿಸುವ ಅಂಶಗಳನ್ನು ಪ್ರದರ್ಶಿಸಲಾಗಿದೆ. ಗೂಗಲ್ ಸರ್ಚ್ ಇಂಜಿನ್ನ ಎಲ್ಲಾ ಅಕ್ಷರಗಳು ಗಣರಾಜ್ಯೋತ್ಸವದ ನಿಮಿತ್ತ ಮೆರವಣಿಗೆ ಮಾಡುತ್ತಿರುವುದನ್ನು ನೋಡಬಹುದಾಗಿದೆ.ಈ ಮೆರವಣಿಗೆಯಲ್ಲಿ ಆನೆ, ಕುದುರೆ, ನಾಯಿ, ಒಂಟೆ, ತಬಲಾ, ಮೆರವಣಿಗೆ ಮಾರ್ಗ, ಸ್ಯಾಕ್ಸೋಫೋನ್, ಪಾರಿವಾಳ, ಹಾಗೂ ರಾಷ್ಟ್ರಧ್ವಜದ ಬಣ್ಣಗಳನ್ನು ಗೂಗಲ್ ಡೂಡಲ್ನಲ್ಲಿ ಹಾಕಲಾಗಿದೆ. ಈ ಬಾರಿ ಗಣರಾಜ್ಯೋತ್ಸವವನ್ನು ನಾಲ್ಕು ದಿನಗಳ ಕಾಲ ಆಚರಿಸಲಾಗುತ್ತಿದೆ.