ಇದು ಸೂರ್ಯಾರಾಧನೆಯ ಹಬ್ಬವಾಗಿದೆ. ಮಕರ ಸಂಕ್ರಾಂತಿ ಪ್ರಸಿದ್ದವಾಗಿರುವ ಸುಗ್ಗಿಯ ಕಾಲದ ಹಬ್ಬ. ಇದನ್ನು ಪೊಂಗಲ್ ಎಂದು ಕರೆಯಲಾಗುತ್ತದೆ. ಪೊಂಗಲ್ ಎಂದರೆ ಅಕ್ಕಿ, ತುಪ್ಪ, ಹಾಲು, ಸಕ್ಕರೆ ಅಥವಾ ಬೆಲ್ಲಗಳಿಂದ ಮಾಡಿದ ಸಿಹಿ ಖಾದ್ಯ. ಸುಗ್ಗಿಯ ಉತ್ಪನ್ನಗಳಿಂದ ಮಾಡಿದ ಇದನ್ನು ಸೂರ್ಯದೇವನಿಗೆ ನೈವೇದ್ಯಮಾಡಲಾಗುವುದು. ಕರ್ನಾಟಕದಲ್ಲಿ ಎಳ್ಳು, ಸಕ್ಕರೆ - ಅಚ್ಚುಗಳನ್ನು ನೆರೆಯವರಿಗೆ ಬಂಧು ಮಿತ್ರರಿಗೆ ಹಂಚುವ ನಲ್ಮೆಯ ಸಾಮಾಜಿಕ ಸಂಪ್ರದಾಯ ಈ ಹಬ್ಬದ ಒಂದು ವಿಶೇಷ. ದನಕರುಗಳಿಗೆ ಮೈ ತೊಳೆದು -