ಸೆನ್ಸೆಕ್ಸ್: ಭರ್ಜರಿ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಮುಂಬೈ| ರಾಜೇಶ್ ಪಾಟೀಲ್| Last Modified ಸೋಮವಾರ, 16 ಸೆಪ್ಟಂಬರ್ 2013 (11:57 IST)
PTI
ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಭರ್ಜರಿ ಚೇತರಿಕೆ ಕಂಡು 293 ಪಾಯಿಂಟ್‌ಗಳ ಕುಸಿತ ಕಂಡಿದೆ.

ಸಾಗರೋತ್ತರ ಕಂಪೆನಿಗಳು ದೇಶಿಯ ಮಾರುಕಟ್ಟೆಯಲ್ಲಿ ಯಾವುದೇ ಷರತ್ತಿಲ್ಲದೇ ಹೂಡಿಕೆ ಮಾಡಲು ಅನುಮತಿ ನೀಡಿದ ಸೆಬಿಯ ಕ್ರಮದಿಂದಾಗಿ ಶೇರುಪೇಟೆ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 293.30 ಪಾಯಿಂಟ್‌ಗಳ ಚೇತರಿಕೆ ಕಂಡು 20,026.06 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 81.95 ಪಾಯಿಂಟ್‌ಗಳ ಏರಿಕೆ ಕಂಡು 5932.55 ಅಂಕಗಳಿಗೆ ತಲುಪಿದೆ.
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.1.47 ರಷ್ಟು ಏರಿಕೆಯಾಗಿದೆ. ಆದರೆ, ಜಪಾನ್ ಮಾರುಕಟ್ಟೆಗೆ ಇಂದು ರಜೆ ಘೋಷಿಸಲಾಗಿದೆ.


ಇದರಲ್ಲಿ ಇನ್ನಷ್ಟು ಓದಿ :