ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 120 ಪಾಯಿಂಟ್ಗಳ ಚೇತರಿಕೆ ಕಂಡು 28,144.32 ಅಂಕಗಳಿಗೆ ತಲುಪಿದೆ. ಮುಂಗಾರು ಅಧಿವೇಶನದಲ್ಲಿ ಜಿಎಸ್ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನಲ್ಲಿ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 47.81 ಪಾಯಿಂಟ್ಗಳ ಏರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ