ಮುಂಗಾರು ಅಧಿವೇಶನದಲ್ಲಿ ಜಿಎಸ್ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 144 ಪಾಯಿಂಟ್ಗಳ ಚೇತರಿಕೆ ಕಂಡಿದೆ. ವಿದೇಶಿ ಬಂಡವಾಳದ ಒಳಹರಿವು ಮತ್ತು ಏಷ್ಯಾ ಮಾರುಕಟ್ಟೆಗಳ ಮಿಶ್ರ ಫಲಿತಾಂಶದ ವಹಿವಾಟಿನಿಂದಾಗಿ ಶೇರುಪೇಟೆ ಸೂಚ್ಯಂಕ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 118.82 ಪಾಯಿಂಟ್ಗಳ ಕುಸಿತ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 143.87 ಪಾಯಿಂಟ್ಗಳ