ಹೂಡಿಕೆದಾರರು ಕೆಲ ಆಯ್ದ ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 93 ಪಾಯಿಂಟ್ಗಳ ಏರಿಕೆ ಕಂಡಿದೆ. ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ವಿದೇಶಿ ಬಂಡವಾಳದ ಒಳಹರಿವು ನಿಧಾನಗತಿಯಲ್ಲಿ ಸಾಗಿದ್ದರಿಂದ ಸೂಚ್ಯಂಕ ಅಲ್ಪ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್ಗಳು ತಿಳಿಸಿದ್ದಾರೆ. ಕಾರ್ಪೋರೇಟ್ ಕಂಪೆನಿಗಳ ತ್ರೈಮಾಸಿಕ ಫಲಿತಾಂಶ ಚೇತರಿಕೆ ಹಾಗೂ ಬ್ಲ್ಯೂ-ಚಿಪ್ ಶೇರುಗಳ ಖರೀದಿಗೆ ಹೂಡಿಕೆದಾರರ ಆಸಕ್ತಿ ತೋರಿದ್ದಾರೆ ಎಂದು ಮಾರುಕಟ್ಟೆಯ ಮೂಲಗಳು