ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 76 ಪಾಯಿಂಟ್ಗಳ ಕುಸಿತ ಕಂಡಿದೆ. ಜಿಎಸ್ಟಿ ಮಸೂದೆ ಅಂಗೀಕಾರ ಮತ್ತು ಕಾರ್ಪೋರೇಟ್ ಕಂಪೆನಿಗಳ ತ್ರೈಮಾಸಿಕ ಫಲಿತಾಂಶ ಚೇತರಿಕೆಯ ಹಿನ್ನೆಲೆಯಲ್ಲಿ ಎರಡು ದಿನಗಳ ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 76.06 ಪಾಯಿಂಟ್ಗಳ ಕುಸಿತ ಕಂಡು 28,132.56 ಅಂಕಗಳಿಗೆ ತಲುಪಿದೆ. ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ಗೃಹೋಪಕರಣ ವಸ್ತುಗಳು ಮತ್ತು ಎಫ್ಎಂಸಿಜಿ ಶೇರುಗಳು