ಕೈಗಾರಿಕೆ ವೃದ್ಧಿ ದರ ಸೂಚ್ಯಂಕ ಕುಸಿತ ಕಂಡ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 88 ಪಾಯಿಂಟ್ಗಳ ಕುಸಿತ ಕಂಡಿದೆ. ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 377.52 ಪಾಯಿಂಟ್ಗಳ ಚೇತರಿಕೆ ಕಂಡಿದ್ದ ಬಿಎಸ್ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 87.79 ಪಾಯಿಂಟ್ಗಳ ಇಳಿಕೆ ಕಂಡು 28,190.04 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ