ಮಹಾಶಿವರಾತ್ರಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು. ಈ ಹಬ್ಬವನ್ನು ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಆಚರಿಸಲಾಗುತ್ತದೆ. ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ, ನಾಲ್ಕು ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ. ಶಿವನಿಗೆ ಬಿಲ್ವ ಪತ್ರೆಗಳನ್ನು ಅರ್ಪಿಸಿ ಪೂಜೆ ಸಲ್ಲಿಸುತ್ತಾರೆ. ಉತ್ತರ ಭಾರತ ಹಾಗೂ ನೇಪಾಳದಲ್ಲಿ ಶಿವನ ಆರಾಧಕರು ಭಂಗ ಮತ್ತು ಲಸ್ಸಿಯನ್ನು ಕುಡಿಯುತ್ತಾರೆ (ಮಹಾರಾಷ್ಟ್ರದಲ್ಲಿ ಇದನ್ನು