ನಾಳೆಯಿಂದ ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್!

bengaluru| Geetha| Last Modified ಮಂಗಳವಾರ, 3 ಆಗಸ್ಟ್ 2021 (19:56 IST)

India set for trial by swing vs as rivalry resumes" width="650" />

ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನಾಟಿಂಗ್ ಹ್ಯಾಮ್ ನ ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ಆರಂಭಗೊಳ್ಳಲಿದ್ದು, ಈ ಪಂದ್ಯದ ಮೂಲಕ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ನ ಎರಡನೇ ಆವೃತ್ತಿಗೆ ಚಾಲನೆ ದೊರೆಯಲಿದೆ.

ಮಯಂಕ್ ಅಗರ್​ ವಾಲ್ ಮತ್ತು ಶುಭಮನ್ ಗಿಲ್ ಗಾಯಗೊಂಡಿರುವ ಕಾರಣ ಆರಂಭಿಕನಾಗಿ ಕೆಎಲ್ ರಾಹುಲ್ ಕಣಕ್ಕಿಳಿಯುವ ಸಾಧ್ಯತೆ ಇದೆ.

ಗಿಲ್, ಮಯಾಂಕ್ ಮತ್ತು ಹಲವು ಆಟಗಾರರು ಗಾಯಗೊಂಡಿದ್ದರೆ, ರಿಷಭ್ ಪಂತ್ ಕೋವಿಡ್ ನಿಂದ ಚೇತರಿಸಿಕೊಂಡು ಕೊನೆಯ ಹಂತದಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ಶ್ರೀಲಂಕಾ ಸರಣಿಯಲ್ಲಿದ್ದ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಟೆಸ್ಟ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಕಳೆದ ಬಾರಿ ಇಂಗ್ಲೆಂಡ್ ನಲ್ಲಿ ಭಾರತ ಪ್ರವಾಸ ಕೈಗೊಂಡಿದ್ದಾಗ 1-4ರಿಂದ ಸೋಲುಂಡಿತ್ತು. ಆದರೆ ಭಾರತ ಅಗ್ರಸ್ಥಾನಿಯಾಗಿ ಫೈನಲ್ ಪ್ರವೇಶಿಸಲು ಯಾವುದೇ ಅಡ್ಡಿ ಉಂಟಾಗಲಿಲ್ಲ.ಇದರಲ್ಲಿ ಇನ್ನಷ್ಟು ಓದಿ :