ಏಷ್ಯನ್ ಗೇಮ್ಸ್ ಪದಕ ವಿಜೇತ ಡಿಂಕೊ ಸಿಂಗ್ ನಿಧನ

ಮುಂಬೈ| Krishnaveni K| Last Modified ಗುರುವಾರ, 10 ಜೂನ್ 2021 (10:38 IST)
ಮುಂಬೈ: ಏಷ್ಯನ್ ಗೇಮ್ಸ್ ಪದಕ ವಿಜೇತ, ಬಾಕ್ಸರ್ ಡಿಂಕೊ ಸಿಂಗ್ ಕ್ಯಾನ್ಸರ್ ನಿಂದಾಗಿ ಮೃತಪಟ್ಟಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತಷ್ಟೇ.
 

ಮಣಿಪುರ ಮೂಲದವರಾದ ಡಿಂಕೊ ಸಿಂಗ್ 2017 ರಿಂದ ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಇದಕ್ಕೆಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಡಿಂಕೊ ಸಿಂಗ್ 1998 ರ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದಿದ್ದರು.
 
ಪದ್ಮಶ್ರೀ ಪ್ರಶಸ್ತಿ ವಿಜೇತರಾಗಿದ್ದ ಡಿಂಕೊ ಸಿಂಗ್ ಗೆ ಇತ್ತೀಚೆಗೆ ಕೊರೋನಾ ಸೋಂಕು ಕೂಡಾ ತಗುಲಿತ್ತು. ಆದರೆ ಅದರಿಂದ ಅವರು ಚೇತರಿಸಿಕೊಂಡಿದ್ದರು. ಅವರ ನಿಧನಕ್ಕೆ ಕ್ರೀಡಾ ಸಚಿವ ಕಿರಣ್ ರಿಜಿಜು, ಬಾಕ್ಸರ್ ವಿಜೇಂದರ್ ಸಿಂಗ್ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :