ನವದೆಹಲಿ: ಕುಸ್ತಿಪಟುಗಳ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಓರ್ವ ಯುವ ಕುಸ್ತಿ ಪಟು ಸಾವಿಗೀಡಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಸೇರಿದಂತೆ ಹಲವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.