ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಶುಕ್ರವಾರ 3 ವಿಕೆಟ್ ಗೆ 276 ರನ್ ಗಳಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಭಾರತ ಚಹಾ ವಿರಾಮಕ್ಕೂ ಮುನ್ನ 364 ರನ್ ಗಳಿಗೆ ಆಲೌಟಾಗಿದೆ. ಇಂಗ್ಲೆಂಡ್ ಬೌಲರ್ ಗಳು ನೀಡಿದ ತಿರುಗೇಟಿನಿಂದ ಶತಕ ಬಾರಿಸಿದ್ದ ಕೆಎಲ್ ರಾಹುಲ್ ಬೇಗನೇ ನಿರ್ಗಮಿಸಿದರೆ, ಅಜಿಂಕ್ಯ ರಹಾನೆ (1) ಕೂಡ ಬಂದಷ್ಟೇ ವೇಗವಾಗಿ ಪೆವಿಲಿಯನ್ ಗೆ ಹೆಜ್ಜೆ ಹಾಕಿದರು. ಕೆಳ ಕ್ರಮಾಂಕದಲ್ಲಿ ರಿಷಭ್ ಪಂತ್ 58