ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸತತ ಎರಡು ಪಂದ್ಯ ಗೆದ್ದು ಸರಣಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಕೋಲ್ಕತ್ತಾದ ಇತಿಹಾಸ ಪ್ರಸಿದ್ಧ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಇಂದು ಅಂತಿಮ ಕದನ ನಡೆಯಲಿದ್ದು, ರೋಹಿತ್ ಶರ್ಮಾ ಪಡೆ ಕ್ಲೀನ್ ಸ್ವಿಪ್ ನತ್ತ ಚಿತ್ತ ನೆಟ್ಟಿದೆ. ಟಿ20 ವಿಶ್ವಕಪ್ನಿಂದ ಹೊರಬಿದ್ದ ಆಘಾತ ಮರೆಮಾಚಲು ಈ ಸರಣಿ ವೈಟ್ವಾಶ್ ಭಾರತಕ್ಕೆ ಕೊಂಚ ನೆಮ್ಮದಿ ತರಬಹುದು. ಇದರ ನಡುವೆ ಸರಣಿಯ