ಮಂಗಳೂರು: ಭಾರತ ಹಾಕಿ ತಂಡದ ಫಾರ್ವರ್ಡ್ ಪ್ಲೇಯರ್ ಆಟಗಾರ, ಒಲಿಂಪಿಯನ್, ಅರ್ಜುನ ಪ್ರಶಸ್ತಿ ವಿಜೇತ ಕೊಡಗಿನ ಎಸ್.ವಿ. ಸುನೀಲ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಲಯದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಸುನೀಲ್ ಹಾಗೂ ನಿಶಾ ಅವರು ಹಸೆಮಣೆ ಏರಿದರು. ನಿಶಾ ಮಂಗಳೂರು ಮೂಲದವರು ಕೊಂಚಾಡಿ ಗ್ರಾಮದ ತಾರನಾಥ-ಸುನಿತಾ ದಂಪತಿಯ ಪುತ್ರಿಯಾಗಿದ್ದು, ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ. ಸೋಮವಾರ ಮಡಿಕೇರಿಯ ಕಾವೇರಿ ಹಾಲ್ನಲ್ಲಿ ಆರತಕ್ಷತೆ ನಡೆಯಲಿದ್ದು, ಸ್ನೇಹಿತರು, ಭಾರತ