ಬಿಜೆಪಿ ಸೇರ್ಪಡೆಗೆ ಕಾರಣ ಬಹಿರಂಗಪಡಿಸಿದ ಸೈನಾ ನೆಹ್ವಾಲ್

ನವದೆಹಲಿ| Krishnaveni K| Last Modified ಬುಧವಾರ, 29 ಜನವರಿ 2020 (13:58 IST)
ನವದೆಹಲಿ: ಖ್ಯಾತ ಬ್ಯಾಡ್ಮಿಟಂನ್ ತಾರೆ ಸೈನಾ ನೆಹ್ವಾಲ್ ರಾಜಕೀಯ ಕ್ಷೇತ್ರಕ್ಕಿಳಿದಿದ್ದು ಇಂದು ನವದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದಕ್ಕೆ ನಿಜ ಕಾರಣವೇನೆಂದು ಸೈನಾ ಹೇಳಿಕೊಂಡಿದ್ದಾರೆ.

 
ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಭಾವಿತನಾಗಿ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಸೈನಾ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಮೋದಿ ಸರ್ಕಾರ ‘ಖೇಲೋ ಇಂಡಿಯಾ ಸೇರಿದಂತೆ ಕ್ರೀಡಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ನೀಡಿರುವ ಕೊಡುಗೆಯಿಂದ ಪ್ರಭಾವಿತನಾಗಿ ಬಿಜೆಪಿಗೆ ಸೇರ್ಪಡೆಯಾಗಿರುವುದಾಗಿ ಹೇಳಿದ್ದಾರೆ.
 
ನವದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾತನಾಡಿದ ಸೈನಾ ‘ವೈಯಕ್ತಿಕವಾಗಿ ನಾನು ಕಠಿಣಪರಿಶ್ರಮಿ. ಹಾಗಾಗಿ ಕಠಿಣ ಪರಿಶ್ರಮ ಪಡುವವರ ಜತೆ ಕೆಲಸ ಮಾಡಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ’ ಎಂದಿದ್ದಾರೆ. ದೆಹಲಿ ಚುನಾವಣೆ ಸಂದರ್ಭದಲ್ಲಿ ಸೈನಾರನ್ನು ಬಿಜೆಪಿ ಪ್ರಚಾರಕ್ಕೆ ಬಳಸಿಕೊಳ್ಳುವ ಸಾಧ‍್ಯತೆಯಿದೆ ಎನ್ನಲಾಗಿದೆ.
ಇದರಲ್ಲಿ ಇನ್ನಷ್ಟು ಓದಿ :