ವುಹಾನ್: ಭಾರತದ ಹೆಮ್ಮೆಯ ಕ್ರೀಡಾಪಟು ಸಾನಿಯಾ ಮಿರ್ಜಾ ಮತ್ತು ಮಾರ್ಟಿನಾ ಹಿಂಗಿಸ್ ಜೋಡಿ ತಮ್ಮ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ. ಇದೀಗ, ವುಹಾನ್ ಟೆನಿಸ್ ಓಪನ್ ಪಂದ್ಯಾವಳಿಯ ಮಹಿಳಾ ಡಬಲ್ಸ್ನಲ್ಲಿ ಸಾನಿಯಾ-ಹಿಂಗಿಸ್ ಜೋಡಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.