ಯುಎಸ್ ಓಪನ್ ಟೆನಿಸ್ ಪಂದ್ಯಾವಳಿಯ ಸೆಮಿಫೈನಲ್ನಲ್ಲಿ ಅಗ್ರ ಶ್ರೇಯಾಂಕಿತ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಸೋತು ನಿರ್ಗಮಿಸಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ್ದ ಪಂದ್ಯದಲ್ಲಿ ಅವರು 10ನೇ ಶ್ರೇಯಾಂಕಿತ ಆಟಗಾರ್ತಿ, ಜೆಕ್ ಗಣರಾಜ್ಯದ ಕರೋಲಿನಾ ಪ್ಲಿಸ್ಕೊವಾ ವಿರುದ್ಧ ಅಚ್ಚರಿಯ ಸೋಲನ್ನು ಕಂಡರು.