ನ್ಯಾಟಿಂಗ್ಹ್ಯಾಮ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ಷಿಪ್ನ ಗುರುವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಳೆದ ಬಾರಿಯ ರನ್ನರ್ ಅಪ್ ಪಾಕಿಸ್ತಾನ ತಂಡ ಪ್ರಬಲ ದಕ್ಷಿಣ ಆಫ್ರಿಕಾ ವಿರುದ್ಧ ಏಳು ರನ್ಗಳ ಜಯಗಳಿಸಿ ಫೈನಲ್ಗೆ ಪ್ರವೇಶಿಸಿದೆ. ಪಾಕ್ನ 149ರನ್ಗಳಿಗೆ ಉತ್ತರಿಸಿದ ದಕ್ಷಿಣ ಆಫ್ರಿಕಾ ನಿಗದಿತ ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 142ರನ್ ಗಳಿಸಲಷ್ಟೇ ಶಕ್ತವಾಯಿತು. ಪಾಕ್ ಪರ ಬ್ಯಾಟಿಂಗ್ ಹಾಗೂ ಬೌಲಿಂಗ್(51ರನ್, 2ವಿಕೆಟ್) ಎರಡರಲ್ಲೂ ಮಿಂಚಿದ ಶಾಹಿದ್ ಆಫ್ರಿದಿ ಗೆಲುವಿನ ಪ್ರಮುಖ ರೂವಾರಿಯಾದರು. | Shahid Afridi, Pakistan, World Twenty20, South Africa